ಜಯನಗರ: ತಿಲಕ್ ನಗರ ವಾರ್ಡ್ ಎಲ್.ಐ.ಸಿ. ಕಾಲೋನಿಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹತ್ತು ಸಾವಿರ ಸಾರ್ವಜನಿಕರು ಮತ್ತು ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲ ವಿತರಣೆ ಕಾರ್ಯಕ್ರಮ.ಮಾಜಿ ಆಡಳಿತ ಪಕ್ಷದ ನಾಯಕರು, ಜಯನಗರ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜುರವರು ಗೋಪೂಜೆ ಸಲ್ಲಿಸಿ ಕಬ್ಬು, ಎಳ್ಳು ವಿತರಿಸಿದರು.
ಎನ್.ನಾಗರಾಜು ಅವರು ಮಾತನಾಡಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ಮಾರ್ಗದರ್ಶನ ಮತ್ತು ಕೆಪಿಸಿಸಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿರವರ ನೇತೃತ್ವದಲ್ಲಿ ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕಬ್ಬು, ಎಳ್ಳು ಬೆಲ್ಲವನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಮನೆ, ಮನೆಗೆ ತಲುಪಿಸಲಾಗಿದೆ ಇಂದು ನಮ್ಮ ಕ್ಷೇತ್ರದಲ್ಲಿ ಲಕ್ಷಾಂತರ ಫಲಾನುಭವಿಗಳು ಇದ್ದಾರೆ.ಸಂಕ್ರಾಂತಿ ಹಬ್ಬದ ಕಿಚ್ಚು ಹಾಯಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಬ್ಬನ್ನು ರೈತರಿಂದ ನೇರವಾಗಿ ಖರೀದಿ ಮಾಡಿ 10ಸಾವಿರ ಜನರಿಗೆ ವಿತರಿಸಲಾಗುತ್ತಿದೆ.ಸಂಕ್ರಾಂತಿ ಹಬ್ಬ ಎಲ್ಲರ ಬಾಳಿನಲ್ಲಿ ಬೆಳಕು ಮೂಡಲಿ, ನಂಬಿಕೆ, ಪ್ರೀತಿ, ವಿಶ್ವಾಸದಿಂದ ಎಲ್ಲರು ಬಾಳೋಣ ಎಂದು ಹೇಳಿದರು.
ಎಲ್.ಸಿ.ಹೆಚ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸಹಕಾರ ನೀಡಿದರು, ಸಂಕ್ರಾಂತಿ ಹಬ್ಬದ ಅಂಗವಾಗಿ ಮಹಿಳೆಯರು ಬೃಹತ್ ರಂಗೋಲಿ ಬಿಡಿಸಿ ಸಂಭ್ರಮಾಚಣೆ ಮಾಡಿದರು.

