ಹಳೇ ಮಾದರಿಯಲ್ಲಿ ಇ-ಖಾತೆ ಅರ್ಜಿ ವಿಲೇವಾರಿ: ಡಿ.ಕೆ ಶಿವಕುಮಾರ್
ಬೆಳಗಾವಿ: ಖಾತೆ ವಿಲೇವಾರಿಗೆ ತಂದಿದ್ದ ರೌಂಡ್ ರಾಬಿನ್ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ…

