ರಾಜ್ಯದಲ್ಲಿರುವ ಅನಧಿಕೃತ ಪಂಪ್‌ಸೆಟ್‌ಗಳಿಗೆ ಕಡಿವಾಣ : ಡಿಕೆಶಿ
ಬೆಳಗಾವಿ: ನೀರಾವರಿ ಯೋಜನೆಗಳಲ್ಲಿ ಕೊನೆಯ ಭಾಗಕ್ಕೆ ನೀರು ತಲುಪಿಸಲು ಅಡ್ಡಿಯಾಗಿರುವ ಅನಧಿಕೃತ ಪಂಪ್ ಸೆಟ್‌ಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಜರುಗಿಸುವುದಾಗಿ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದಲ್ಲಿ ಆಡಳಿತ ಪಕ್ಷದ ಶಾಸಕ ಜಿ.ಟಿ.ಪಾಟೀಲ್ ಘಟಪ್ರಭಾ ನದಿಯ ಹಿಡಕಲ್ ಜಲಾಶಯದಿಂದ ಕೊನೆಯ ಭಾಗಕ್ಕೆ ನೀರು ಹರಿಯುತ್ತಿಲ್ಲ. ನಾಲೆಗಳನ್ನು ದುರಸ್ತಿ ಮಾಡಬೇಕಿದೆ, ಇನ್ನು ಎಷ್ಟು ವರ್ಷ ನಾವು ನೀರಿನಿಂದ ವಂಚಿತವಾಗಬೇಕು? ಸುಮಾರು 15 ಸಾವಿರ ಪಂಪ್ ಸೆಟ್‌ಗಳನ್ನು ಅಕ್ರಮವಾಗಿ ಅಳವಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ…

